No.252,18th cross, Sadashiva Nagar, Bangalore – 560080 India.

ಮುಂಬರುವ ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಮರುಚುನಾವಣೆಯಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್-ಮತ್ತು ಜೆಡಿಎಸ್ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕಾಂಗ್ರೆಸ್ ಮಂತ್ರಿಗಳ ಸಭೆ ಸಮಾಲೋಚನೆ ನಡೆಸಿದೆವು

ನನ್ನ ಗೃಹ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸಚಿವರಿಗೆ ಏರ್ಪಡಿಸಿದ್ದ ಉಪಾಹಾರಕೂಟದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಕೂಲಂಕಷ ಚರ್ಚೆ ನಡೆಸಲಾಯಿತು. ಮುಂಬರುವ ಮರುಚುನಾವಣೆಯಲ್ಲೂ ಮೈತ್ರಿ ಸರಕಾರದ ಅಂಗಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ಒಟ್ಟಿಗೆ ಹೋಗಬೇಕೆಂಬುದು ಹೈಕಮಾಂಡ್ ನಿಲುವಾಗಿದೆ. ಇದರ ಸಫಲ ಸಾಕಾರಕ್ಕೆ ಅಗತ್ಯ ತಂತ್ರಗಾರಿಕೆ ರೂಪಿಸುವ ಹಾಗೂ ಪಕ್ಷ ಸಂಘಟನೆ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ಆರ್.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್, ಯು.ಟಿ. ಖಾದರ್, ವೆಂಕಟರಮಣಪ್ಪ, ಕೃಷ್ಣ ಬೈರೇಗೌಡ, ಪುಟ್ಟರಂಗಶೆಟ್ಟಿ, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ್, ರಾಜಶೇಖರ ಪಾಟೀಲ, ಶಿವಶಂಕರರೆಡ್ಡಿ, ಜಯಮಾಲಾ, ಜಮೀರ್ ಅಹಮದ್ ಖಾನ್, ಶಂಕರ್ ಪಾಲ್ಗೊಂಡಿದ್ದರು.